ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲೆಯ ವತಿಯಿಂದ ಪ್ರತಿಭಟನೆ, ರಸ್ತೆಗಳು ಬಂದ, ನಂತರ ತಹಶೀಲ್ದಾರ್ ಅವರ ಮೂಲಕ ಡಿಸಿ ಅವರಿಗೆ ಮನವಿ*.

*ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲೆಯ ವತಿಯಿಂದ ಪ್ರತಿಭಟನೆ, ರಸ್ತೆಗಳು ಬಂದ, ನಂತರ ತಹಶೀಲ್ದಾರ್ ಅವರ ಮೂಲಕ ಡಿಸಿ ಅವರಿಗೆ ಮನವಿ*.

ಪ್ರತಿಯೊಬ್ಬನ ಮನಸ್ಸಿನಲ್ಲಿ ಧಾರ್ಮಿಕವಾದ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಕುಂದು ತರುತ್ತಿರುವ ಪ್ರಯತ್ನಗಳು ಖಂಡನೀಯ !ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿ ಬಳಸಿಕೊಳ್ಳುತ್ತಿದೆ ಎಂದು ಸಂದೇಹ. ಅನಾಮಿಕ ವ್ಯಕ್ತಿಯ ಹಿನ್ನೆಲೆ ಬಹಿರಂಗಪಡಿಸಬೇಕು !ಧರ್ಮಸ್ಥಳ ಕೇವಲ ಧಾರ್ಮಿಕ ಕೇಂದ್ರವಲ್ಲ ಧರ್ಮಸ್ಥಳವು ಕೋಟ್ಯಂತರ ಭಕ್ತರಿಗೆ ಶ್ರದ್ಧಾ ಕೇಂದ್ರವಾಗಿದೆ.

ಇದು ಕೇವಲ ಒಂದು ದೇವಸ್ಥಾನವಲ್ಲ‌ಒಂದೆ ಜಾತಿಗೆ ಸಂಬಂಧಿಸಿದ್ದಲ್ಲ. ಧಾರ್ಮಿಕ ಚಟುವಟಿಕೆಗಳ ಜೊತೆಗೆ, ಸಾವಿರಾರು ದೇವಾಲಯಗಳ ಜೀರ್ಣೋದ್ಧಾರ, ಕೆರೆಗಳ ಪುನಶ್ಚೇತನ, ವ್ಯಸನಮುಕ್ತಿ ಅಭಿಯಾನ ಹಾಗೂ ಸ್ವಸಹಾಯ ಸಂಘಗಳ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆಗಳನ್ನು ನೀಡಿರುವದನ್ನು ಯಾರು ಮರೆಯಬಾರದು.

ಎಡಪಂಥೀಯರ ನಿದ್ದೆಗೆಡಿಸಿರುವ ಹೆಗ್ಗಡೆಯವರ ಕೆಲಸಗಳು ಕೆಲವರಿಗೆ ಹೊಟ್ಟೆ ಊರಿ ಇದೆ. ಅವರ ಜನಪರ ಕಾರ್ಯಗಳನ್ನು ಸಹಿಸಿಕೊಳ್ಳಲು ಆಗದೆ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಸನಾತನ‌‌ ಸಂಸ್ಕೃತಿ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಈ ಷಡ್ಯಂತ್ರಗಳನ್ನು ಖಂಡಿಸಬೇಕು.

ಸರ್ಕಾರ ಸರಿಯಾದ ನಿರ್ಧಾರ ತಗೆದುಕೊಳ್ಳದಿದ್ದರೆ ಬಿದಿಗಿಳಿದು ಹೋರಾಟ ಮಾಡಬೇಕಾಗುತ್ತದೆ.ಈ ಸಂದರ್ಭದಲ್ಲಿ ಗದಗ ಜಿಲ್ಲಾ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಗದಗ ನಗರ ಮತ್ತು ಗದಗ ಗ್ರಾಮೀಣ ಅಧ್ಯಕ್ಷರು, ಪಕ್ಷದ ಹಿರಿಯರು, ನಗರಸಭೆ ಸದ್ಯಸರು, ವಿವಿಧ ಮಹಿಳಾ ಸಂಘದ ಪದಾಧಿಕಾರಿಗಳು, ಮಹಿಳಾ ಮತ್ತು ಯುವ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಯುವ ಮೋರ್ಚಾದ ಗದಗ ನಗರದ ಅಧ್ಯಕ್ಷರು,ನಗರ ತಂಡದ ಸದ್ಯಸರು, ಪ್ರಕೋಷ್ಠದ ಜಿಲ್ಲಾ ಪದಾಧಿಕಾರಿಗಳು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *