
*ಬೆಳ್ಳಟ್ಟಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಲೋಕಾಯುಕ್ತರು
*ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಲೋಕಾಯುಕ್ತ ಅಧಿಕಾರಿಗಳು ಜನ ಸಂಪರ್ಕ ಸಭೆಯನ್ನು ನಡೆಸಿದರು
.ಈ ಸಂದರ್ಭದಲ್ಲಿ ಲೋಕಾಯುಕ್ತ ಇನಸ್ಪೆಕ್ಟರ್ ಪರಮೇಶ್ವರ ಕವಟಗಿ ಹಾಗೂ ಎಸ್.ಎಸ್.ತೇಲಿ ಇವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಾಗ ಅತಿಕ್ರಮಣ, ಸ್ಮಶಾನಕ್ಕೆ ರಸ್ತೆ ಸಂಪರ್ಕ, ಬೆಳೆ ವಿಮೆ ಹಣ ಜಮೆ, ಜಮೀನಿನ ಶತ್೯ ಕಡಿಮೆ ಮಾಡುವುದು, ಭಾರಿ ವಾಹನಗಳ ಒಡಾಟದಿಂದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಸಂಬಂಧಿಸಿದಂತೆ ಒಟ್ಟು ಐದು ಅರ್ಜಿಗಳು ಸ್ವೀಕೃತವಾದವು.

ಬೆಳ್ಳಟ್ಟಿ, ಸುಗನಹಳ್ಳಿ, ಬನ್ನಿಕೊಪ್ಪ ಹಾಗೂ ವಡವಿ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ರಾಘವೇಂದ್ರ ರಾವ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು
.*ವರದಿ*✍️ಚಂದ್ರಶೇಖರ ಸೋಮಣ್ಣವರ
