ಕಾಂಗ್ರೆಸ್ ಬಂದ ಮೇಲೆ ಹಿಂದೂಗಳ ಭಾವನೆಗಳಿಗೆ ಧಕ್ಕೆ- ಶಾಸಕ ಡಾ.ಚಂದ್ರು

*ಕಾಂಗ್ರೆಸ್ ಬಂದ ಮೇಲೆ ಹಿಂದೂಗಳ ಭಾವನೆಗಳಿಗೆ ಧಕ್ಕೆ- ಶಾಸಕ ಡಾ.ಚಂದ್ರು

*ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ನೆಡೆದುಕೊಳ್ಳುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಧರ್ಮಸ್ಥಳ ಕ್ಷೆತ್ರದ ಮೇಲೆ ಯಾವನೋ ಅನಾಮಿಕನ ಮಾತು ಕೇಳಿ ಮಾಡುತ್ತಿರುವ ಕೆಲಸ ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.

ಹೌದು….! ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತರದ ವಿರುದ್ಧ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಶ್ರೀ ಜಗದ್ಗುರು ಫಕೀರೇಶ್ವರ ಮಠದಿಂದ ಮೆರವಣಿಗೆಯ ಮೂಲಕ ಪಟ್ಟಣದ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಸಮಸ್ತ ಮಂಜುನಾಥ ಸ್ವಾಮಿಯ ಭಕ್ತರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಕೇಸರಿ ವಸ್ತ್ರ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು.ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ಖಾವಂದರಾದ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಧರ್ಮದ್ರೋಹಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಶಿರಹಟ್ಟಿ ಮಂಡಲದ ಅಧ್ಯಕ್ಷರು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು, ಮಹಿಳೆಯರು ಉಪಸ್ಥಿತರಿದ್ದರು

.*ವರದಿ*✍️ಚಂದ್ರಶೇಖರ ಸೋಮಣ್ಣವರ

Leave a Reply

Your email address will not be published. Required fields are marked *