ಇಂಧನ ಸಚಿವರಿಂದ ಜಿಲ್ಲಾ ಕೇಂದ್ರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭ.

ಇಂಧನ ಸಚಿವರಿಂದ ಜಿಲ್ಲಾ ಕೇಂದ್ರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭ.

ಗದಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 10 :ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಕೆಪಿಟಿಸಿಎಲ್ 220 ಕೆ.ವಿ.ಸ್ಟೇಷನ್ ಆವರಣದಲ್ಲಿ ಗದಗ ಜಿಲ್ಲಾ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಬುಧವಾರ ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಡಿಗಲ್ಲು ನೆರವೇರಿಸಿದರು. .

.ಈ ಸಂದರ್ಭದಲ್ಲಿ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ ಅಜ್ಜಂಪೀರ್ ಎಸ್ ಖಾದ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿಬಿ ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಶಾಸಕ ಡಿ ಆರ್ ಪಾಟೀಲ, ಕವಿಪ್ರನಿನಿ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಹುಬ್ಬಳ್ಳಿ ಹೆಸ್ಕಾಂ ನಿರ್ದೇಶಕ (ತಾಂತ್ರಿಕ) ಎಸ್.ಜಗದೀಶ್, ಹುಬ್ಬಳ್ಳಿ ಹೆಸ್ಕಾಂ ನಿರ್ದೇಶಕ (ಹಣಕಾಸು) ಪ್ರಕಾಶ ಪಾಟೀಲ ಗಣ್ಯರು, ಹಿರಿಯರು ಇಲಾಖೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *