ರೈತರಿಗೆ ತಾಡಪತ್ರಿ ವಿತರಣೆಗಾಗಿ ಅರ್ಜಿ ಆಹ್ವಾನ.

*ರೈತರಿಗೆ ತಾಡಪತ್ರಿ ವಿತರಣೆಗಾಗಿ ಅರ್ಜಿ ಆಹ್ವಾನ*

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರೈತರಿಗೆ ಕೃಷಿ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆ ಅಡಿಯಲ್ಲಿ ಪೂರೈಕೆಯಾದ ತಾಡಪತ್ರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದೇ ದಿನಾಂಕ 12/9/25 ರಿಂದ 20/9/25ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.ಕಳೆದ ಮೂರು ವರ್ಷಗಳಲ್ಲಿ ತಾಡಪತ್ರಿಗಳನ್ನು ತೆಗೆದುಕೊಂಡಿರುವ ಪಲಾನುಭವಿಗಳಿಗೆ ಅರ್ಜಿ ಹಾಕಲು ಅವಕಾಶ ಇರುವುದಿಲ್ಲ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪೂರೈಕೆಯಾದ ತಾಡಪತ್ರಿಗಳ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದಲ್ಲಿ ದಿನಾಂಕ 22/9/25 ರಂದು ಸೋಮವಾರ ಬೆಳಿಗ್ಗೆ 11:00 ಗಂಟೆಗೆ ರೈತ ಸಂಪರ್ಕ ಕೇಂದ್ರ ಶಿರಹಟ್ಟಿಯಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ಧೇಶಕರು ತಿಳಿಸಿದ್ದಾರೆ.

*ವರದಿ*✍️ಚಂದ್ರಶೇಖರ ಸೋಮಣ್ಣವರ

Leave a Reply

Your email address will not be published. Required fields are marked *