
ನೂತನ ಅಂಗನವಾಡಿ ಕಟ್ಟಡಕ್ಕೆ ಭೂಮಿಪೂಜೆ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಭೂಮಿಪೂಜೆಯನ್ನು ಶಾಸಕ ಡಾ.ಚಂದ್ರು ಲಮಾಣಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಚಂದ್ರು ಲಮಾಣಿ ನನ್ನ ಮತಕ್ಷೇತ್ರದಲ್ಲಿ ಇನ್ನು ಹಲವು ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಈ ಬಗ್ಗೆ ಮುಂಬರುವ ದಿನಗಳಲ್ಲಿ ಸರ್ಕಾರದ ಗಮನಕ್ಕೆ ತರುವ ಮೂಲಕ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಾನು ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಭರವಸೆ ನೀಡಿದರು.
ಚಿಕ್ಕಮಕ್ಕಳಿಗೆ ಪ್ರಾರಂಭಿಕ ಹಂತದಲ್ಲಿಯೆ ಉತ್ತಮ ಸೌಕರ್ಯಗಳು ದೊರೆಯುವ ಉದ್ದೇಶದಿಂದ ಅಂಗನವಾಡಿ ಕಟ್ಟಡ ನಿರ್ಮಾಣವಾಗುತ್ತಿದೆ ಗುತ್ತಿಗೆದಾರರು ಕಟ್ಟಡವನ್ನು ಸುಸಜ್ಜಿತವಾಗಿ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ✍️ಚಂದ್ರಶೇಖರ ಸೋಮಣ್ಣವರ
