
*ಸಂಗೀತ ಸಾಧಕರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ*
ಗದಗ : ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ ೧೫ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗದುಗಿನ ಪಂ. ವೀರೇಶ ಕಿತ್ತೂರ, ಕೊಪ್ಪಳದ ಪಂ. ಸದಾಶಿವ ಪಾಟೀಲ ಹಾಗೂ ಬೆಂಗಳೂರಿನ ಪಂ. ನಾಗಲಿಂಗಯ್ಯ ಗವಾಯಿಗಳು ಅವರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ನೀಲಗುಂದ ಗುದ್ನೇಶ್ವರ ಶ್ರೀಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಹರ್ಲಾಪುರ ಕೊಟ್ಟೂರೇಶ್ವರ ಶ್ರೀಮಠದ ಪೂಜ್ಯಶ್ರೀ ಕೊಟ್ಟೂರೇಶ್ವರ ಶ್ರೀಗಳು, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಲಯ್ಯಜ್ಜನವರು, ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ,ಸಿದ್ದಲಿಂಗಯ್ಯಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಅಧ್ಯಕ್ಷರಾದ ರೇಷ್ಮಾಬಾನು ಹಳೆಮನೆ, ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕರಾದ ಎಸ್. ಎಚ್. ಶಿವನಗೌಡ್ರ, ಮುದುಕಯ್ಯಸ್ವಾಮಿ ಹಿರೇಮಠ, ಸಮಾಜಸೇವಕ ಉಮೇಶ ಹಡಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
