
ಕ್ರೀಡೆ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಅತ್ಯಮೂಲ್ಯವಾದುದು-ಶಾಸಕ ಡಾ.ಚಂದ್ರು ಲಮಾಣಿ.
ಗದಗ ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳ ಕ್ರೀಡಾಕೂಟಗಳು ಜರುಗಿದವು.ಈ ಸಂದರ್ಭದಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಇವರು ಒಲಂಪಿಕ್ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

.ಈ ವೇಳೆ ಮಾತನಾಡಿದ ಡಾ.ಚಂದ್ರು ಲಮಾಣಿ ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆ ಎನ್ನುವುದು ಅತ್ಯಮೂಲ್ಯವಾಗಿದ್ದು ಈ ಮೂಲಕ ಶಿಸ್ತನ್ನು ಕಲಿತು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ.ರಾಘವೇಂದ್ರರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕಿ ನಾಯಕ್ ಸೇರಿದಂತೆ ಹಲವು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾ ಅಭಿಮಾನಿಗಳು ಉಪಸ್ಥಿತರಿದ್ದರು.

*ವರದಿ*✍️ಚಂದ್ರಶೇಖರ ಸೋಮಣ್ಣವರ
