ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಪೂರ್ವಭಾವಿ ಸಭೆ

ಗದಗ (ಕರ್ನಾಟಕ ವಾರ್ತೆ) ಜೂನ್ 2: ಬರುವ ಜೂನ್ 12 ರಂದು ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಆಚರಿಸಲಾಗುತ್ತಿದ್ದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದೇ ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಬೇಕು. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮೈಕ್ ಮೂಲಕ ಪ್ರಚುರಪಡಿಸಬೇಕು ಎಂದರು.ಗ್ರಾಮ ಪಂಚಾಯತ್ ವತಿಯಿಂದ ಡಂಗುರ ಸಾರುವ ಕೆಲಸವಾಗಬೇಕು. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ದಿನದಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿಸಿ ನಂತರ ಕಾರ್ಮಿಕ ಇಲಾಖೆಗೆ ವರದಿ ಸಲ್ಲಿಸಬೇಕು. ಒಟ್ಟಾರೆಯಾಗಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಯಾಗಬೇಕು ಎಂದು ಜಿಲ್ಲಾದಿಕಾರಿಗಳು ನಿರ್ದೇಶನ ನೀಡಿದರು

.ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ ಮಾತನಾಡಿ ಬರುವ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುವುದು. ಈ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ, ಕಾಲೇಜು, ಎನ್.ಎಸ್.ಎಸ್, ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ , ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದು ಸಭೆಗೆ ವಿವರಿಸಿದರು.ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ,ಕಾರ್ಮಿಕ ನಿರೀಕ್ಷಕರು-1 ನೇ ವೃತ್ತ , ಕಾರ್ಮಿಕ ನಿರೀಕ್ಷಕರು 2 ನೇ ವೃತ್ತ, ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಂದೇಶ ಪಾಟೀಲ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *