
*ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ-ನಾಲ್ವರಿಗೆ ಗಾಯ.!

*ಧಾರವಾಡ ಜಿಲ್ಲೆಯ ನರೇಂದ್ರ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.ಗಾಯಾಳುಗಳನ್ನು ಸೂಕ್ತ ಚಿಕಿತ್ಸೆಗಾಗಿ ಧಾರವಾಡ ನಗರದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾರವಾಡ ನಗರದ ಗ್ರಾಮೀಣ ಪೋಲೀಸ್ ಠಾಣೆಯ ಸಿಪಿಐ ಕಮತಗಿ ಇವರು ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿದ್ದಾರೆಂದು ಮಾಹಿತಿ ತಿಳಿದು ಬಂದಿದೆ.*
ವರದಿ*✍️ಚಂದ್ರಶೇಖರ ಸೋಮಣ್ಣವರ
