
*ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಸಿಎಮ್ ಅಧ್ಯಕ್ಷತೆಯಲ್ಲಿ ಸಭೆ.
*ಗ್ರೇಟರ್ ಬೆಂಗಳೂರು ಪ್ರಾಧಿಕಾರದ ( ಜಿಬಿಎ) ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಹಲವೆಡೆ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಕುರಿತು ಸಿಎಮ್ ಸಿದ್ದರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚೀವರುಗಳಾದ ಎಚ್.ಕೆ.ಪಾಟೀಲ್,ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
*ವರದಿ*✍️ಚಂದ್ರಶೇಖರ ಸೋಮಣ್ಣವರ
