ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ (ಕರ್ನಾಟಕ ವಾರ್ತೆ) ಜೂನ್ 14 : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜೂನ್ 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.ಗದುಗಿನ ಕೆಎಚ್ ಪಿ ಐ ಎಂ ಎಸ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಐ ಎಂ ಎ ಮೆಡಿಕೊ ರಾಜ್ಯ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸುವರು.ಮಧ್ಯಾಹ್ನ 1.15 ಗಂಟೆಗೆ ನರಗುಂದ ತಾಲ್ಲೂಕಿನ ಬೆಣ್ಣೆಹಳ್ಳ ವೀಕ್ಷಣೆ ಹಾಗೂ ಮಳೆಯಿಂದ ಹಾನಿಗೊಳಗಾದ ಕುರ್ಲಗೇರಿ, ಸುರಕೋಡ, ಹದ್ಲಿ ಹಾಗೂ ಖಾನಾಪೂರ ಗ್ರಾಮಗಳಿಗೆ ಭೇಟಿ ನೀಡುವರು.ಸಾಯಂಕಾಲ 6 ಗಂಟೆಗೆ ಗದಗ ಸಚಿವರ ಕಾರ್ಯಾಲಯ, ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಸೊರಟೂರ ಹಿರಿಯರೊಂದಿಗೆ ಸಭೆ ನಡೆಸುವರು.ಸಾಯಂಕಾಲ 7.30 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದಲ್ಲಿ ಲಿಂ.ಪಂ.ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ.ಡಾ||ಪಂ.ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ನಂತರ ಗದಗನಲ್ಲಿ ವಾಸ್ಯವ್ಯ ಮಾಡುವರು ಎಂದು ಸಚಿವರ ಕಾರ್ಯಲಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *