
*ಗಂಗಾವತಿ
ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ್ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಅಭಿಮಾನಿಗಳು ಬಳಗದ* ಜಿಲ್ಲಾ ಅಧ್ಯಕ್ಷ ಈಶ್ವರ ಛಲವಾದಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ* ಅವರು, ದಯಾನಂದ್ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಆರ್ ಸಿಬಿ ವಿಜಯೋತ್ಸವದಲ್ಲಿ ಉಂಟಾದ ಕಾಲ್ತುಳಿತ ಘಟನೆಗೆ ಕಾರಣರೆಂದು ಅಮಾನತು ಮಾಡಲಾಗಿದೆ. ಇದರಲ್ಲಿ ದಯಾನಂದ್ ಅವರನ್ನು ಬಲಿಪಶು ಮಾಡಲಾಗಿದ್ದು ಸರ್ಕಾರ ತಕ್ಷಣ ಅಮಾನತು ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ನಿಷ್ಠಾವಂತ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು, ಮೂಲಕ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.