
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚಂದನ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಓಂಕಾರ ಹೇಳುವುದರ ಮೂಲಕ ಯೋಗ ಅಭ್ಯಾಸದಲ್ಲಿ ತೊಡಗಿದರು.ವಿದ್ಯಾರ್ಥಿಗಳು ಆರೋಗ್ಯ ರಕ್ಷಣೆಗಾಗಿ ನಿತ್ಯವೂ ಯೋಗ ಮಾಡುವುದರಿಂದ ಮಾನಸಿಕ ಸದೃಡತೆಯ ಜೊತೆಗೆ ಬುದ್ದಿಶಕ್ತಿಯು ವೇಗವಾಗಿ ಬೆಳೆದು ಆರೋಗ್ಯವಾಗಿರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಯೋಗದ ಪ್ರಾಮುಖ್ಯತೆಯ ಬಗ್ಗೆ ತಿಳಿಸಲಾಯಿತು

.ಈ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಿಕ್ಷಕರು, ಗುರುಮಾತೆಯರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.*ವರದಿ*✍️ಚಂದ್ರಶೇಖರ ಸೋಮಣ್ಣವರ
