ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ

ಗದಗ (ಕರ್ನಾಟಕ ವಾರ್ತೆ) ಜೂನ್ 27: ಗದಗ ಜಿಲ್ಲಾಡಳಿತ, ಜಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಶುಕ್ರವಾರ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸುAಕದ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *