ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ: -ಹಣಕಾಸು ಸೇವೆ ಇಲಾಖೆ….

ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ:

ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯು (ಡಿ ಎಫ್ ಎಸ್), ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ತಿಳಿಸಿದೆ ಎಂಬ ಮಾಧ್ಯಮಗಳ ವರದಿಗಳಿಗೆ ಸಂಬಂಧಿಸಿದಂತೆ, ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಸೂಚಿಸಿಲ್ಲ ಎಂದು ಹಣಕಾಸು ಸೇವೆಗಳ ಇಲಾಖೆ ತಿಳಿಸಿದೆ

.ಜನಧನ್ ಯೋಜನಾ ಖಾತೆಗಳು, ಜೀವನ್ ಜ್ಯೋತಿ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಳವಡಿಕೆಯನ್ನು ಹೆಚ್ಚಿಸಲು ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಸೇವೆಗಳ ಇಲಾಖೆಯು ಮೂರು ತಿಂಗಳ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನದ ಸಮಯದಲ್ಲಿ ಬ್ಯಾಂಕುಗಳು ಎಲ್ಲಾ ಬಾಕಿ ಖಾತೆಗಳ ಮರು- ಕೆವೈಸಿಯನ್ನು ಸಹ ಕೈಗೊಳ್ಳಲಿವೆ.

ನಿಷ್ಕ್ರಿಯ ಪಿಎಂಜೆಡಿವೈ ಖಾತೆಗಳ ಸಂಖ್ಯೆಯನ್ನು ಹಣಕಾಸು ಸೇವೆಗಳ ಇಲಾಖೆಯು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಅವರ ಖಾತೆಗಳನ್ನು ಸಕ್ರಿಯಗೊಳಿಸಲು ಆಯಾ ಖಾತೆದಾರರನ್ನು ಸಂಪರ್ಕಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ. ಪಿಎಂಜೆಡಿವೈ ಖಾತೆಗಳ ಒಟ್ಟು ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ನಿಷ್ಕ್ರಿಯ ಪಿಎಂಜೆಡಿವೈ ಖಾತೆಗಳನ್ನು ಸಾಮೂಹಿಕವಾಗಿ ಮುಚ್ಚುವ ಯಾವುದೇ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿಲ್ಲ.

Leave a Reply

Your email address will not be published. Required fields are marked *