
ಹೃದಯಾಘಾತಕ್ಕೆ ಕಾಲೇಜು ಉಪನ್ಯಾಸಕಿ ಬಲಿ..!
ಗದಗ ನಗರದಲ್ಲಿ ಕಾಲೇಜು ಉಪನ್ಯಾಸಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ.
ಪ್ರಭಾ ಕಲ್ಮಠ (48) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದು ಇವರು ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ಕಾಲೇಜು ಉಪನ್ಯಾಸಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಪ್ರಭಾ ಇವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣವೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲಿ ಪ್ರಭಾಳ ಪ್ರಾಣ ಪಕ್ಷಿ ಹಾರಿಹೋಗಿದೆ.
ವರದಿ✍️ಚಂದ್ರಶೇಖರ ಸೋಮಣ್ಣವರ