
*ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ*—-ಕೊಪ್ಪಳ ಜುಲೈ 17 : ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು.

ಕೊಪ್ಪಳ ತಾಲ್ಲೂಕಿನ ಮೆತಗಲ್ ಗ್ರಾಮದಲ್ಲಿ ನಬಾರ್ಡ ವತಿಯಿಂದ ನಿರ್ಮಿಸುತ್ತಿರುವ ಹಣ್ಣು ಬೆಳೆಗಳ ಸಂಸ್ಕರಣ ಘಟಕಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಯಲಬುರ್ಗಾ ತಾಲ್ಲೂಕಿನ ಮಾಟಲದಿನ್ನಿ ಗ್ರಾಮದ ರೈತರ ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿದರು. ಅಂತರಾಷ್ಟ್ರೀಯ ಸಾವಯವ ಕೃಷಿಕ ಬಸಯ್ಯ ಹಿರೇಮಠ ಅವರ ನುಗ್ಗೆಕಾಯಿ ಸಂಸ್ಕರಣ ಘಟಕಕ್ಕೂ ಭೇಟಿ ನೀಡಿದರು. ನಂತರ ಕುಷ್ಟಗಿ ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದ ನೈಸರ್ಗಿಕ ಕೃಷಿಕ ಡಾ.ದೇವಿಂದ್ರ ಬಳ್ಳುಟಗಿ ಅವರ ತೋಟಕ್ಕೆ ಭೇಟಿ ನೀಡಿ, ಕೃಷಿ ಸಂಬಂಧಿಸಿದ ವಿಷಯಗಳ ಕುರಿತು ರೈತರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರುದ್ರೇಶಪ್ಪ ಟಿ.ಎಸ್., ಉಪನಿರ್ದೆಶಕ ಸಿದ್ದೇಶ್ವರ ಎಲ್., ಮೀನುಗಾರಿಕೆ ಇಲಾಖೆಯ ಉಪನಿರ್ದೆಶಕ ಡಾ. ಶ್ರೀನಿವಾಸ ಕುಲಕರ್ಣಿ, ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಉಪಾಧ್ಯಕ್ಷರಾದ ವೀರಣ್ಣ ಕಮತರ, ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಡಾ. ರವಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
